
ದಾವಣಗೆರೆ: ಖೋಟಾ ನೋಟು ಚಲಾವಣೆ ದಂಧೆಯಲ್ಲಿ ತೊಡಗಿಕೊಂಡಿದ್ದ ನಾಲ್ವರನ್ನು ಬಸವಾಪಟ್ಟಣ ಠಾಣೆ ಪೊಲೀಸರು ಬಂಧಿಸಿ 3.75 ಲಕ್ಷ ಖೋಟಾ ನೋಟನ್ನು ವಶಪಡಿಸಿಕೊಂಡಿದ್ದಾರೆ.
ಹೂವಿನಹಡಗಲಿ ತಾಲೂಕಿನ ನಡುವಿನ ತಾಂಡದ ಸಂತೋಷಕುಮಾರ (32), ಕೊಟ್ಟೂರು ತಾಲೂಕಿನ ಬೇವೂರು ಗ್ರಾಮದ ವಿರೇಶ(37), ದಾವಣಗೆರೆ ತಾಲೂಕು ಕುಕ್ಕವಾಡ ಗ್ರಾಮದ ಕುಬೇರಪ್ಪ(60) ಹಾಗೂ ಕೊಟ್ಟೂರಿನ ಬೇವೂರು ಗ್ರಾಮದ ಹನುಮಂತಪ್ಪ(75) ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳು ಈಗಾಗಲೇ ಮೈಸೂರು, ತುಮಕೂರು ಸೇರಿದಂತೆ ವಿವಿಧೆಡೆ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದರ ಬಗ್ಗೆ ಮಾಹಿತಿ ಸಿಕ್ಕಿದೆ. ಇದರ ಬಗ್ಗೆ ವಿಸ್ತೃತ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಖೋಟಾ ನೋಟು ಚಲಾವಣೆ- ನಾಲ್ವರ ಬಂಧನ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


