
ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಿಗೂಢ ಸರಣಿ ಸಾವುಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಶನಿವಾರ ತನ್ನ ತನಿಖೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಸ್ಐಟಿ ತನ್ನ ಕಚೇರಿಯನ್ನು ಧರ್ಮಸ್ಥಳದ ಬದಲಿಗೆ ಬೆಳ್ತಂಗಡಿಯಲ್ಲಿ ಆರಂಭಿಸಿದೆ. ಮಲ್ಲಿಕಟ್ಟೆಯಲ್ಲಿರುವ ಗುಪ್ತಚರ ಬ್ಯೂರೋ ಆವರಣದಲ್ಲಿ ಸ್ಥಾಪಿಸಲಾದ ಎಸ್ ಐಟಿ ಕಚೇರಿಗೆ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸ್ಥಳಗಳಿಗೆ ಭೇಟಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಪೊಲೀಸ್ ಉಪ ಮಹಾನಿರ್ದೇಶಕ (ಡಿಐಜಿ) ಎಂ.ಎನ್.ಅನುಚೇತ್ ಅವರು ಮಂಗಳೂರಿಗೆ ಆಗಮಿಸಿದ್ದು, ಎಸ್ ಐಟಿಗೆ ನಿಯೋಜಿಸಲಾದ 20 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಗೂಢ ಸರಣಿ ಸಾವು- ಎಸ್ ಐಟಿ ತನಿಖೆ ಆರಂಭ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


