
ಮಧುಗಿರಿ: ತನ್ನ ಬಗ್ಗೆ ಜನರು ಕೆಟ್ಟದಾಗಿ ಮಾತನಾಡಿ ಕೊಳ್ಳುತ್ತಿದ್ದರೆ ಎಂಬ ಕಾರಣಕ್ಕೆ ಅತಿಥಿ ಶಿಕ್ಷಕಿಯೊಬ್ಬರು ಡೆತ್ ನೋಟ್ ಬರೆದು ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಲಾಲಪೇಟೆಯಲ್ಲಿ ಘಟನೆ ನಡೆದಿದೆ.
ನೇರಳೆಕೆರೆ ಶಾಲೆಯ ಅತಿಥಿ ಶಿಕ್ಷಕಿ ನಾಗರತ್ನ (34) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ಇವರ ಪತಿ ಪ್ರದೀಪ ಲಾರಿ ಚಾಲಕನಾಗಿದ್ದಾರೆ, ಇವರು ಮೂಲತಃ ಕೊಡ್ಲಾಪುರ ವಾಸಿಯಾಗಿದ್ದು ಪಟ್ಟಣದ ಲಾಲಪೇಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಮಕ್ಕಳಿಬ್ಬರು ಎರಡು ಮತ್ತು ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಸೋಮವಾರ ಪತಿ ಬೆಂಗಳೂರಿಗೆ ಹೋದ ಸಂದರ್ಭದಲ್ಲಿ ಮಕ್ಕಳು ಶಾಲೆಗೆ ಹೋದ ನಂತರ ಡೆತ್ ನೋಟ್ ನಲ್ಲಿ ನನ್ನ ಬಗ್ಗೆ ಸಾರ್ವಜನಿಕರು ಕೆಟ್ಟದಾಗಿ ಮಾತನಾಡಿಕೊಳ್ಳುತ್ತಿದ್ದು ಇದರಿಂದ ನೊಂದು ನನ್ನ ಸಾವಿಗೆ ನಾನೇ ಕಾರಣ, ಗಂಡ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾನೆ ಎಂದು ಬರೆದಿದ್ದಾರೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ .
ಅತಿಥಿ ಶಿಕ್ಷಕಿ ಆತ್ಮಹತ್ಯೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


