--ಇಲ್ಲಿ ಜಾಹೀರಾತು--

19 ನವಿಲು ನಿಗೂಢ ಸಾವು- ಅನುಮಾನ

On: August 4, 2025 2:08 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ ಹಳ್ಳದ ಪಕ್ಕದ ಜಮೀನಿನಲ್ಲಿ 19 ನವಿಲು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಅನುಮಾನಕ್ಕೆ ಕಾರಣವಾಗಿದೆ.
ಜಮೀನು ಒಂದರಲ್ಲಿ ರಾತ್ರಿ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದು, ಜಮೀನಿಗೆ ತೆರಳಿದ್ದ ಮಾಲೀಕರು ಜಮೀನಿನ ಅಲ್ಲಲ್ಲಿ ಸತ್ತು ಬಿದ್ದ ನವಿಲುಗಳನ್ನು ಕಂಡು ಸ್ಥಳೀಯ ಪೊಲೀಸರಿಗೂ ಹಾಗೂ ವಲಯದ ಅರಣ್ಯಾಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ತಾಲ್ಲೂಕು ಪಶು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದು ಪರಿಶೀಲಿಸಿ 5 ಗಂಡು ಹಾಗೂ 14 ಹೆಣ್ಣು ನವಿಲು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ, ನವಿಲುಗಳ ಸಾವಿಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ, ಅರಣ್ಯಾಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಸತ್ತ ನವಿಲುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ, ವಿಧಿ ವಿಜ್ಞಾನ ಕೇಂದ್ರದಿಂದ ವರದಿ ಬಂದ ನಂತರವಷ್ಟೇ 19 ನವಿಲುಗಳ ಸಾವಿಗೆ ಕಾರಣ ಏನೆಂಬುದು ಗೊತ್ತಾಗಲಿದೆ.
ಭಾನುವಾರ ನವಿಲುಗಳು ಸತ್ತ ಜಮೀನಗೆ ಅರಣ್ಯ ಇಲಾಖೆಯ ಎಸಿಎಫ್ ಮಲ್ಲಿಕಾರ್ಜುನ್, ವಲಯ ಅರಣ್ಯಾಧಿಕಾರಿ ಸುರೇಶ್, ಬೀಟ್ ಗಾರ್ಡ್ ಮಹೇಶ್ ಕುಮಾರ್, ಉಪ ಅರಣ್ಯ ವಲಯಾಧಿಕಾರಿ ಮುತ್ತುರಾಜು ಭೇಟಿ ನೀಡಿದ್ದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now