
ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಇನ್ ಸ್ಟಾಗ್ರಾಂ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆಯೊಡ್ಡಿದ್ದ ಆರೋಪದಡಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತರನ್ನು ಭುವನ್ ಗೌಡ ಹಾಗೂ ರಾಜೇಶ್ ಎಂದು ಗುರುತಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಇದೇ ಪ್ರಕರಣದಲ್ಲಿ ಆಗಸ್ಟ್ 2ರಂದು ಟಿ ಓಬಣ್ಣ ಮತ್ತು ಗಂಗಾಧರ ಎಂಬುವವರನ್ನು ಬಂಧಿಸಲಾಗಿತ್ತು.
ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಅವರು ಜುಲೈ 28ರಂದು ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು.
ರಮ್ಯಾಗೆ ಅಶ್ಲೀಲ ಮೆಸೇಜ್- ನಾಲ್ವರ ಬಂಧನ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


