
ಗದಗ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮಂಗಳವಾರದಿಂದ ಮುಷ್ಕರ ಆರಂಭಿಸಿದ್ದು, ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೋಗುತ್ತಿದ್ದ ಬಸ್ ಮೇಲೆ ಮಾಸ್ಕ್ ಧರಿಸಿದ್ದ ಇಬ್ಬರು ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆ 7.15 ರ ಸುರಿಗೆ ಹುಬ್ಬಳ್ಳಿ- ಗದಗ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೋಗುತ್ತಿದ್ದ ಬಸ್ ಅನ್ನು ಬೈಕ್ ನಲ್ಲಿ ಹಿಂಬಾಲಿಸಿದ ಇಬ್ಬರು ಮುಸುಕುಧಾರಿ ವ್ಯಕ್ತಿಗಳು, ಬಸ್ ಮುಂದೆ ಬಂದು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿ ಕೇವಲ 20-25 ಪ್ರಯಾಣಿಕರು ಮಾತ್ರ ಇದ್ದುದರಿಂದ ಯಾರಿಗೂ ಯಾವುದೇ ಗಾಯಗಳಾಗಿಲ್ಲ.
ಬಸ್ ಮೇಲೆ ಕಲ್ಲು ತೂರಾಟ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


