--ಇಲ್ಲಿ ಜಾಹೀರಾತು--

ಅಗ್ನಿ ಅವಘಡ- ಐವರು ಸಜೀವ ದಹನ

On: August 16, 2025 2:25 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.
ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ.
ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ಹಾಗೂ ನಮ್ಮ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದರೆ ದುರಾದೃಷ್ಟವಂತ ಕುಟುಂಬ ಬೆಂಕಿಗೆ ಆಹುತಿಯಾಗಿದೆ.
ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಹಾಗೂ ನಮ್ಮ ರಕ್ಷಣಾ ತಂಡದವರು ಕಾರ್ಯಾಚರಣೆ ಮಾಡ್ತಿದ್ದಾರೆ. ಇನ್ನು ಮೃತದೇಹಗಳು ಇರುವ ಶಂಕೆ ಇದೆ ಎಂದು ತಿಳಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now