
ರಾಮನಗರ: ದೇವಾಲಯಗಳು ಮತ್ತು ಅಂಗನವಾಡಿಯಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 59 ವರ್ಷದ ಕಳ್ಳನೊಬ್ಬ ಬುಧವಾರ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಂಡ್ಯದ ಮದ್ದೂರಿನ ದುಂಡನಹಳ್ಳಿ ಮೂಲದ ರಮೇಶ್ ಎಂದು ಗುರುತಿಸಲಾಗಿದೆ. ಶೌಚಾಲಯದಲ್ಲಿ ರಮೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಈತ ತನ್ನ ಪಂಚೆ ಬಳಸಿ ಈ ಕೃತ್ಯ ಎಸಗಿದ್ದಾನೆ. ಮತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ರಮೇಶ್ ಅವರ ಪುತ್ರಿಯರಾದ ಆಶಾ ಮತ್ತು ಉಷಾ ತಮ್ಮ ತಂದೆಯ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿದ್ದಾರೆ.
ಪೊಲೀಸ್ ಠಾಣೆಯ ಶೌಚದಲ್ಲಿ ಕಳ್ಳನ ಶವ ಪತ್ತೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


