
ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮತ್ತೆ ಮೇಘ ಸ್ಫೋಟವಾಗಿದ್ದು, ಭಾರೀ ಮಳೆಯಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು ಎರಡು ಡಜನ್ ಗೂ ಹೆಚ್ಚು ಮನೆಗಳು ಹಾಗೂ ಸೇತುವೆಗಳು ಕೊಚ್ಚಿ ಹೋಗಿವೆ.
ಬಹುತೇಕ ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನಗರ ಮತ್ತು ಇತರೆಡೆ ಹಲವಾರು ತಗ್ಗು ಪ್ರದೇಶಗಳು ಮತ್ತು ರಸ್ತೆಗಳು ಮುಳುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಪ್ರಾಂತ್ಯದ ಹಲವು ಭಾಗಗಳಲ್ಲಿ ಪರಿಸ್ಥಿತಿ ಸಾಕಷ್ಟು ಗಂಭೀರವಾಗಿದೆ ಮತ್ತು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಲು ಶ್ರೀನಗರದಿಂದ ಜಮ್ಮುವಿಗೆ ಭೇಟಿ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ಜಮ್ಮು, ಕಾಶ್ಮೀರದಲ್ಲಿ ಮೇಘ ಸ್ಫೋಟ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


