--ಇಲ್ಲಿ ಜಾಹೀರಾತು--

ಹೆಡ್ ಕಾನ್ ಸ್ಟೇಬಲ್, ಇಂಜಿನಿಯರ್ ಲೋಕಾ ಬಲೆಗೆ

On: September 5, 2025 2:28 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹಾಗೂ ಬೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ದೇವನಹಳ್ಳಿ ಠಾಣೆ ಪಿಎಸ್ ಐ ಜಗದೇವಿ, ಕಾನ್ಸ್ ಟೇಬಲ್ ಗಳಾದ ಮಂಜುನಾಥ್, ಅಮರೇಶ್ ವಿರುದ್ಧ ದೂರು ದಾಖಲಾಗಿತ್ತು. ಪೋಕ್ಸೊ ಕೇಸ್ ನಲ್ಲಿ ಚಾರ್ಜ್ ಶೀಟ್ ಹಾಕಲು 70 ಸಾವಿರ ಲಂಚ ಕೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಬೆನ್ನಲ್ಲೇ ಮಹಿಳಾ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಜಗದೇವಿ ಮತ್ತು ತನಿಖಾಅಧಿಕಾರಿಗೆ ಸಹಾಯ ಮಾಡುತ್ತಿದ್ದ ಕಾನ್ ಸ್ಟೆಬಲ್ ಮಂಜುನಾಥ್ ಎಂಬ ಇಬ್ಬರು ತಲೆಮರೆಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now