ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯ ಏರುಪೇರಾಗಿದೆ.
ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿಯಂತೆ ಹಿರಿಯ ನಟ ಉಮೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಅವರು ಮನೆಯಲ್ಲಿ ಸ್ನಾನದ ರೂಂ ನಲ್ಲಿ ಕಾಲು ಜಾರಿ ಆಯಾ ತಪ್ಪಿ ಬಿದ್ದಿದ್ದರು. ಆ ಬಳಿಕ ಅವರ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಅವರನ್ನು ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೊಂಟ ಮತ್ತು ಕಾಲಿಗೆ ಗಂಭೀರವಾಗಿ ಪೆಟ್ಟಾಗಿದ್ದು, ಸಂತ ಹಾಗೂ ಕಾಲಿಗೆ ಸರ್ಜರಿ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ನಟ ಉಮೇಶ್ ಆರೋಗ್ಯದಲ್ಲಿ ಏರುಪೇರು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


