--ಇಲ್ಲಿ ಜಾಹೀರಾತು--

ನಟ ಪಂಕಜ್ ಧೀರ್ ನಿಧನ

On: October 15, 2025 3:06 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮುಂಬೈ: ಭಾರತದ ಬಲು ಜನಪ್ರಿಯ ಧಾರಾವಾಹಿ ಮಹಾಭಾರತದಲ್ಲಿ ಕರ್ಣನ ಪಾತ್ರ ಸೇರಿದಂತೆ ಹಲವಾರು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ನಟ ಪಂಕಜ್ ಧೀರ್ (68) ಬುಧವಾರ ನಿಧನ ಹೊಂದಿದ್ದಾರೆ.
ಪಂಕಜ್ ಧೀರ್ ಅವರು ಹಲವು ವರ್ಷಗಳಿಂದಲೂ ಕ್ಯಾನ್ಸರ್ ಜೊತೆ ಹೋರಾಡುತ್ತಿದ್ದರು. ಇತ್ತೀಚೆಗಷ್ಟೆ ಕ್ಯಾನ್ಸರ್ ಗಾಗಿ ಪ್ರಮುಖ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನ ಹೊಂದಿದ್ದಾರೆ.
ಪಂಕಜ್ ಅವರು ಹಿಂದಿಯ ಹಲವಾರು ಜನಪ್ರಿಯ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ ವಿಷ್ಣುವರ್ಧನ್ ಜೊತೆಗೆ ಎರಡು ಕನ್ನಡ ಸಿನಿಮಾಗಳಲ್ಲಿಯೂ ಸಹ ಪಂಜಕ್ ನಟಿಸಿದ್ದಾರೆ. ವಿಷ್ಣುವರ್ಧನ್ ಜೊತೆಗೆ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಸಹ ನಟಿಸಿದ್ದ ‘ವಿಷ್ಣು-ವಿಜಯ’ ಸಿನಿಮಾನಲ್ಲಿ ಪಂಕಜ್ ಧೀರ್ ಅವರು ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದರು. ಅದಾದ ಬಳಿಕ 2005 ರಲ್ಲಿ ಬಿಡುಗಡೆ ಆದ ವಿಷ್ಣುಸೇನ’ ಸಿನಿಮಾನಲ್ಲಿಯೂ ಸಹ ಡಿಸಿಪಿ ಸಮರ್ಜೀತ್ ಸಿಂಗ್ ಪಾತ್ರದಲ್ಲಿ ಪಂಕಜ್ ಧೀರ್ ನಟಿಸಿದ್ದಾರೆ. ಮಾತ್ರವಲ್ಲದೆ ಕನ್ನಡದ ಕಲ್ಟ್ ಕ್ಲಾಸಿಕ್ ಸಿನಿಮಾ ಬರ’ ಸಿನಿಮಾನಲ್ಲಿಯೂ ಪಂಕಜ್ ನಟಿಸಿದ್ದಾರೆ.
ಬಾಲಿವುಡ್ ಹಾಗೂ ಸ್ಯಾಂಡಲ್ ವುಡ್ ಹಿರಿಯ ನಟನ ನಿಧನದಿಂದ ಅತೀವ ದುಃಖದಲ್ಲಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now