
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ವೀಡಿಯೋ ವೈರಲ್ ಆದ ಬೆನ್ನಲ್ಲೇ, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಅಲ್ಲದೇ ನಟ ದರ್ಶನ್ ಆಪ್ತ, ನಟ ಧನ್ವೀರ್ ಅವರ ಮೊಬೈಲ್ ಜಪ್ತಿ ಮಾಡಿದ್ದಾರೆ.
ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯದ ವಿಚಾರವಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ನಟ ಧನ್ವೀರ್ ವಿಚಾರಣೆ ನಡೆಸಲಾಗುತ್ತಿದೆ. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ ಅವರು ನಟ ಧನ್ವೀರ್ ವಿಚಾರಣೆ ನಡೆಸುತ್ತಿದ್ದಾರೆ. ಈ ವಿಚಾರಣೆಯ ವೇಳೆಯಲ್ಲಿ ನಟ ಧನ್ವೀರ್ ನನಗೆ ಪರಪ್ಪನ ಅಗ್ರಹಾರ ಜೈಲಿನ ಒಳಗಿನ ವೀಡಿಯೋಗಳನ್ನು ಆತ್ಮೀಯರೊಬ್ಬರು ಕಳುಹಿಸಿದ್ದರು. ನನಗೆ ಕಳುಹಿಸಿದ್ದ ವೀಡಿಯೋವನ್ನು ನಾನು ಯಾರಿಗೂ ಷೇರ್ ಮಾಡಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ವೀಡಿಯೋ ವೈರಲ್ ಹಿನ್ನಲೆಯಲ್ಲಿ ಕೊಲೆ ಆರೋಪಿ ದರ್ಶನ್ ಆಪ್ತ, ನಟ ಧನ್ವೀರ್ ಮೊಬೈಲ್ ಜಪ್ತಿ ಮಾಡಿದ್ದಾರೆ. ಆ ಬಳಿಕ ಧನ್ವೀರ್ ಮೊಬೈಲ್ ರಿಟ್ರೀವ್ ಮಾಡಲು ಎಫ್ ಎಸ್ ಎಲ್ ಗೆ ಪೊಲೀಸರು ರವಾನಿಸಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲೇ ನಟ ಧನ್ವೀರ್ ಇರುವುದಾಗಿ ತಿಳಿದು ಬಂದಿದೆ.
ನಟ ದರ್ಶನ್ ಆಪ್ತ ಧನ್ವೀರ್ ಮೊಬೈಲ್ ಜಪ್ತಿ
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


