
ಬೆಂಗಳೂರು: ಮಾಜಿ ಶಾಸಕ ಆರ್.ವಿ.ದೇವರಾಜ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಾಜ್ಯದ ಹಲವು ಹಿರಿಯ ರಾಜಕಾರಣಿಗಳು ಆರ್ ವಿಡಿ ಎಂದೇ ಹೆಸರಾಗಿದ್ದ ಆರ್.ವಿ.ದೇವರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಚಿಕ್ಕಪೇಟೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನ್ಕಕೆ ಸಿದ್ದತೆ ಮಾಡಲಾಗಿದ್ದು, ಬುಧವಾರ ಅವರ ಹುಟ್ಟುಹಬ್ಬದ ದಿನವೇ ಹುಟ್ಟೂರಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜಕಾರಣಿಗಳು ಆರ್ ವಿ ನಿಧನಕ್ಕೆ ವಿಷಾದ ವ್ಯಕ್ತಪಡಿಸಿದ್ದು ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಮಾಜಿ ಶಾಸಕ ಆರ್.ವಿ.ದೇವರಾಜ್ ನಿಧನ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


