
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ವಾಟರ್ ಟ್ಯಾಂಕರ್ ಕಾರಿನ ಮೇಲೆ ಬಿದ್ದ ಘಟನೆ
ಕಾಮಗಾರಿ ಮಾಡಲಾಗುತ್ತಿದ್ದ ರಸ್ತೆಗೆ ನೀರು ಹಾಕುತ್ತಿದ್ದ ವೇಳೆ, ಟ್ರ್ಯಾಕ್ಟರ್ ನಿಂದ ಕಳಚಿ ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಇದೀಗ ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ಮೂವರು ಮಕ್ಕಳು, ತಂದೆ ತಾಯಿ ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಇದೀಗ ನೆಲಮಂಗಲ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೆಲಮಂಗಲದಲ್ಲಿ ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


