
ತುಮಕೂರು: ಕಳೆದ ಎರಡು ದಿನಗಳಲ್ಲಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಎರಡು ಲಂಗೂರ್ ಗಳು ಸೇರಿದಂತೆ 11 ಮಂಗಗಳು ಸಾವಿಗೀಡಾಗಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ತುಮಕೂರು ತಾಲ್ಲೂಕಿನ ದೇವರಾಯನದುರ್ಗ-ದುರ್ಗದಹಳ್ಳಿ ಅರಣ್ಯ ಪ್ರದೇಶದಲ್ಲಿ 200 ರಿಂದ 500 ಮೀಟರ್ ವ್ಯಾಪ್ತಿಯಲ್ಲಿ ಒಂಬತ್ತು ಮಂಗಗಳು ಮತ್ತು ಎರಡು ಲಂಗೂರ್ ಗಳ ಮೃತದೇಹಗಳು ಪತ್ತೆಯಾಗಿವೆ ಎಂದು ಹೇಳಿದರು.
ಶುಕ್ರವಾರ ಸಂಜೆ ಈ ವಿಷಯ ಬೆಳಕಿಗೆ ಬಂದ ನಂತರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಶನಿವಾರ ಬೆಳಗ್ಗೆ ಮತ್ತೆ ಹೆಚ್ಚಿನ ಮಂಗಗಳು ಸತ್ತಿರುವುದು ಕಂಡುಬಂದಿದೆ.
ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪ್ರಾಥಮಿಕವಾಗಿ ಪ್ರಾಣಿಗಳ ಅನ್ನನಾಳ ಮತ್ತು ಕರುಳಿನಲ್ಲಿ ಅಕ್ಕಿ ಕಂಡುಬಂದಿದ್ದು, ವಿಷಾಹಾರ ಸೇವನೆಯಿಂದ ಸಾವಿಗೀಡಾಗಿರಬಹುದು ಎಂದು ಶಂಕಿಸಲಾಗಿದೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇವರಾಯನದುರ್ಗ-ದುರ್ಗದಹಳ್ಳಿ ಅರಣ್ಯದಲ್ಲಿ 11 ಮಂಗ ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


