
ಶಿರಾ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂದು ಶಿರಾ ನಗರದ ಪೆಶಮ್ಮ ಮೊಹಲ್ಲಾ ನಿವಾಸಿ ರಾಬಿಯಾ ಗಂಭೀರ ಆರೋಪ ಮಾಡಿದ್ದಾರೆ. ಅವರು ತಮ್ಮ ಮಗುವನ್ನು ಆರು ದಿನಗಳ ಕಾಲ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆರಂಭದಲ್ಲಿ ಯಾವುದೇ ಹಣ ಕೇಳದ ಸಿಬ್ಬಂದಿ, ಡಿಸ್ಚಾರ್ಜ್ ಮಾಡುವ ವೇಳೆ ಆರು ದಿನಗಳಿಗೆ 600 ರೂ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿದ್ದಾರೆ. ಇದು ಸರ್ಕಾರಿ ಆಸ್ಪತ್ರೆಯಾಗಿದ್ದರೂ ಹಣ ಕೇಳುತ್ತಿರುವುದು ಏಕೆ ಎಂದು ಪ್ರಶ್ನಿಸಿದಾಗ, ಇಲ್ಲಿ ಯಾವುದೂ ಉಚಿತವಾಗಿ ಸಿಗುವುದಿಲ್ಲ ಎಂದು ಸಿಬ್ಬಂದಿ ಉತ್ತರಿಸಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ 100 ಹಾಸಿಗೆಗಳಿವೆ ಎಂದು ಪ್ರಚಾರ ಮಾಡಲಾಗುತ್ತಿದ್ದು, ಆದರೆ ವಾಸ್ತವದಲ್ಲಿ ಪ್ರತಿಯೊಂದಕ್ಕೂ ಲಂಚ ಕೊಡಬೇಕಾದ ಪರಿಸ್ಥಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿರಾ ತಾಲೂಕಿನಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದಿರುವುದಾಗಿ ರಾಬಿಯಾ ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯಿಂದ ಲಂಚಕ್ಕೆ ಬೇಡಿಕೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


