--ಇಲ್ಲಿ ಜಾಹೀರಾತು--

7ನೇ ಮಹಡಿಯಿಂದ ಬಿದ್ದು ಬಾಲಕ ಸಾವು

On: February 2, 2026 2:32 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಬಾಲಕ ಮದ್ಯಪಾನ ಮಾಡಲು ಅವಕಾಶ ನೀಡಿದ್ದ ಪಬ್ ಮಾಲೀಕರ ವಿರುದ್ಧ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜನವರಿ 31ರಂದು ವಿಷ್ಣುವರ್ಧನ್ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ನ 7ನೇ ಮಹಡಿಯಿಂದ ಬಿದ್ದು 15 ವರ್ಷದ ಬಾಲಕ ಮೃತಪಟ್ಟಿದ್ದ. ಮಗನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ತಂದೆ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಾಗ ಬಾಲಕ ಪಬ್ವೊಂದರಲ್ಲಿ ಸ್ನೇಹಿತರೊಂದಿಗೆ ಮದ್ಯಪಾನ ಹಾಗೂ ಧೂಮಪಾನ ಮಾಡಿರುವುದು ಗೊತ್ತಾಗಿತ್ತು. ನಂತರ ಬಾಲಕನ ಸ್ನೇಹಿತರು ಆತನನ್ನು ಮನೆಗೆ ತಲುಪಿಸಿದ್ದರು. ಆದರೆ ಮನೆಗೆಯೊಳಗೆ ಹೋಗದ ಬಾಲಕ ಅಪಾರ್ಟ್ಮೆಂಟ್ನ 7ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದ. ಪಬ್ ಮಾಲೀಕರ ವಿರುದ್ಧ ಬಾಲ ನ್ಯಾಯ ಕಾಯ್ದೆ ಹಾಗೂ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿಕರ ಮನೆಗೆ ಬಂದಿದ್ದ ಯುವಕ ಕಟ್ಟಡದಿಂದ ಬಿದ್ದು ಸಾವು ಅನುಮಾನಾಸ್ಪದ ಮಾದರಿಯಲ್ಲಿ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜನವರಿ 30ರಂದು ಭಾರತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಫ್ರೂಟ್ಸ್ ಮಾರ್ಕೆಟ್ ಬಳಿ ಘಟನೆ ನಡೆದಿದ್ದು, ಇರ್ಫಾನ್ ಮುಲಾನಿ (26) ಎಂಬಾತ ಮೃತಪಟ್ಟಿದ್ದ.
ಸಂಬಂಧಿಕರ ಮನೆಗೆ ಬಂದಿದ್ದ ಇರ್ಫಾನ್ ಮುಲಾನಿ ಕಟ್ಟಡದಿಂದ ಅನುಮಾನಾಸ್ಪದ ರೀತಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಭಾರತಿನಗರ ಪೊಲೀಸರು ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now