--ಇಲ್ಲಿ ಜಾಹೀರಾತು--

ಕಾರು ಡಿವೈಡರ್ ಗೆ ಡಿಕ್ಕಿ: ಒರ್ವ ಸಾವು

On: February 2, 2026 2:36 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಅರಸೀಕೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೆಂಕಿಗೆ ಆಹುತಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಒಬ್ಬರು ಮೃತಪಟ್ಟರೆ, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಹ್ಯುಂಡೈ ಐ-20 ಕಾರು ಅತಿ ವೇಗವಾಗಿ ಚಲಿಸುತ್ತಿತ್ತು. ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಡಿವೈಡರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಲವು ಬಾರಿ ಉರುಳಿ ಪಕ್ಕದ ಲೇನ್ಗೆ ಬಿದ್ದಿದೆ. ವಿದ್ಯುತ್ ಕಂಬವೂ ನೆಲಸಮವಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಈಟಿವಿ ಭಾರತದ ಪ್ರತಿನಿಧಿಗೆ ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ.
ಅಪಘಾತದ ನಂತರ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಬಹುತೇಕ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸ್ಥಳೀಯರು ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ಸಹಕರಿಸಿದರು ಎಂಬ ಮಾಹಿತಿ ಲಭ್ಯವಾಗಿದೆ.
ವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು
ಹಾರನಹಳ್ಳಿಯ ಮಂಜುನಾಥ್ (30) ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರ ಮೃತದೇಹವನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.
ನವೀನ್ ಮತ್ತು ಪವನ್ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಹಾಸನದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ದುರಂತಕ್ಕೆ ಕಾರಣವೆಂದು ಪ್ರಾಥಮಿಕವಾಗಿ ತಿಳಿದು ಬಂದಿದೆ. ಬಾಣಾವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now