
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ಐಪಿಎಲ್ ಪಂದ್ಯಗಳು ನಡೆಯುವುದು ಗೃಹ ಇಲಾಖೆಯ ಕ್ಲಿಯರೆನ್ಸ್ ಮೇಲೆ ಅವಲಂಬಿತವಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದ್ದು, ಗೃಹ ಸಚಿವ ಜಿ.ಪರಮೇಶ್ವರ್ ಈ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಜಸ್ಟೀಸ್ ಕುನ್ಹಾ ವರದಿಯ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಸೂಚಿಸಿದೆ. ಕ್ರೀಡಾಂಗಣದಲ್ಲಿ ಕಾಲ್ತುಳಿತದಂತಹ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಪೊಲೀಸ್ ಆಯುಕ್ತರ ನೇತೃತ್ವದ ಸಮಿತಿ ಈಗಾಗಲೇ ಕೆಲವು ಶಿಫಾರಸುಗಳನ್ನು ನೀಡಿದೆ.
ಫೆ.12ರಂದು ಗೃಹ ಸಚಿವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಕೆಎಸ್ ಸಿಎ ಮತ್ತು ಆರ್ಸಿಬಿ ತಂಡದ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
ಈಗಾಗಲೇ ಕೆಎಸ್ ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಆರ್ ಸಿಬಿಯ ರಾಜೇಶ್ ಮೆನನ್ ನೇತೃತ್ವದ ತಂಡ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ.
ಚಿನ್ನಸ್ವಾಮಿಯಲ್ಲಿ ಐಪಿಎಲ್- ಫೆ. 12ಕ್ಕೆ ಸಭೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


