--ಇಲ್ಲಿ ಜಾಹೀರಾತು--

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯ ಹತ್ಯೆ, 7 ಅಪ್ರಾಪ್ತ ವಯಸ್ಕರ ಬಂಧನ, 15 ಲಕ್ಷ ಪರಿಹಾರ ಘೋಷಣೆ

On: February 24, 2026 3:01 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಶಿವಮೊಗ್ಗ: ಶಿವಮೊಗ್ಗದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನ ಕೊಲೆಯಾಗಿದ್ದು, ಆ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಘಟನೆಯ ನಂತರ, ನಗರದಲ್ಲಿ ದೊಡ್ಡ ಪೊಲೀಸ್ ಪಡೆ ನಿಯೋಜಿಸಲಾಗಿತ್ತು. ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ (16) ಪರೀಕ್ಷೆಗೆ ಮುನ್ನ ವಿಶೇಷ ತರಗತಿಗೆ ಹಾಜರಾದ ನಂತರ ಈ ಘಟನೆ ಸಂಭವಿಸಿದೆ. ಸಂಕೇತ್ ತನ್ನ ಶಾಲೆಯ ಹೊರಗೆ ಹುಡುಗರ ಗುಂಪಿನ ನಡುವೆ ನಡೆದ ವಾಗ್ವಾದದಲ್ಲಿ ಮಧ್ಯಪ್ರವೇಶಿಸಿದ್ದರು. ಈ ವೇಳೆ ವಾಗ್ವಾದ ನಡೆದು ಎಂದು ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಸುದ್ದಿಗಾರರಿಗೆ ತಿಳಿಸಿದರು.
ಸಂಕೇತ್ ಓದುತ್ತಿದ್ದ ಶಾಲೆಯ ಹಳೆಯ ವಿದ್ಯಾರ್ಥಿಗಳೇ ಕೊಲೆ ಮಾಡಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿಯಿಂದ ನಿನ್ನೆ ರಾತ್ರಿಯೇ ಎಸ್ಪಿ ನಿಖಿಲ್ ಘಟನೆಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಏಳು ಅಪ್ರಾಪ್ತ ವಯಸ್ಕರನ್ನು ಈ ಸಂಬಂಧ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.

ಕ್ರಿಕೆಟ್ ಮ್ಯಾಚ್ ವಾಗ್ವಾದದಿಂದ ಕೊಲೆ
ಸಂಕೇತ್ ಹತ್ಯೆಯ ಬಗ್ಗೆ ಶಿವಮೊಗ್ಗ ಎಸ್.ಪಿ. ನಿಖಿಲ್ ಪ್ರತಿಕ್ರಿಯಿಸಿದ್ದು, ಕ್ರಿಕೆಟ್ ಮ್ಯಾಚ್ ವಾಗ್ವಾದದಿಂದ ಕೊಲೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ವಶಕ್ಕೆ ಪಡೆದಿದ್ದೇವೆ. ಇದಕ್ಕೆ ಒಂದು ವಿಶೇಷ ತನಿಖಾ ತಂಡ ರಚಿಸಿದ್ದೇವೆ. ಎರಡು ದಿನದ ಹಿಂದೆ ಕ್ರಿಕೆಟ್ ಮ್ಯಾಚ್ ನಡೆದಿತ್ತು. ಗಾಂಜಾ ಹಾವಳಿ ಬಗ್ಗೆಯೂ ತನಿಖೆ ಮಾಡುತ್ತೇವೆ . ಇಲ್ಲಿ ಒಂದು ಪೊಲಿಸ್ ಉಪ ಠಾಣೆಯನ್ನು ತೆರೆಯಲು ಕ್ರಮ ಕೈಗೊಳ್ಳುತ್ತೇವೆ. ಆರೋಪಿಗಳನ್ನು ಗಾಂಜಾ ಟೆಸ್ಟ್ ಗೆ ಒಳಪಡಿಸುತ್ತೇವೆ ಎಂದು ಎಸ್ಪಿ ನಿಖಿಲ್ ಹೇಳಿದ್ದಾರೆ.
ಬಿಗಿ ಪೊಲೀಸ್ ಬಂದೋಬಸ್ತ್
ಸಂಕೇತ್ ಹತ್ಯೆಯ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಊರುಗಡೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಗಾಂಜಾ ಹಾವಳಿಯೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಊರುಗಡೂರಿನಲ್ಲಿ ಪೊಲೀಸ್ ಠಾಣೆ ತೆರೆಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸಂಕೇತ್ ನನ್ನು ಅಪ್ರಾಪ್ತ ಬಾಲಕರೇ ಹತ್ಯೆ ಮಾಡಿದ್ದಾರೆ ಎಂಬುದು ಅಘಾತಕಾರಿ ಅಂಶ. ಸಂಕೇತ್ ಓದುತ್ತಿದ್ದ ಶಾಲೆಯ ಹಳೆಯ ವಿದ್ಯಾರ್ಥಿಗಳೇ ಸೇರಿಕೊಂಡು ಸಂಕೇತ್ ನನ್ನು ಹತ್ಯೆ ಮಾಡಿದ್ದಾಗಿ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ.

15 ಲಕ್ಷ ಪರಿಹಾರ ಘೋಷಣೆ
ಇನ್ನು ಮೃತ ಬಾಲಕನ ಕುಟುಂಬಕ್ಕೆ ರಾಜ್ಯ ಸರ್ಕಾರ ಒಟ್ಟಾರೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಹತ್ಯೆಯಾದ ಸಂಕೇತ್ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 10 ಲಕ್ಷ, ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಸರ್ಕಾರದ ಪರವಾಗಿ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಪರಿಹಾರದ ಹಣದ ಬಗ್ಗೆ ಘೋಷಣೆ ಮಾಡಿದ್ದಾರೆ.
ಸಿಎಂ, ಉಸ್ತುವಾರಿ ಸಚಿವ ರೊಂದಿಗೆ ಮಾತಾಡಿ ಪರಿಹಾರ ಘೋಷಣೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ. ಮೃತ ಸಂಕೇತ ಜೊತೆಗೆ ಗಾಯಾಳು ಆಗಿರುವ ಗಿರೀಶ್ ಗೆ ಪರಿಹಾರ ನೀಡಲಾಗುವುದು. ಮಾದಕ ವಸ್ತುಗಳ ಬಗ್ಗೆ ಜಿಲ್ಲಾಡಳಿತದಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮ ನಡೆಸುತ್ತಿದೆ.

ಈ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗುವುದು. ಬಡಾವಣೆಯಲ್ಲಿ ಉಪ ಪೊಲೀಸ್ ಠಾಣೆ ತೆರೆಯುವ ಬಗ್ಗೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಕಟ್ಟಿ ಹೇಳಿದ್ದಾರೆ.
ಶಿವಮೊಗ್ಗದ ಬಿಜೆಪಿ ಶಾಸಕ ಎಸ್ ಎನ್ ಚನ್ನಬಸಪ್ಪ ಕೂಡ ಆಸ್ಪತ್ರೆಗೆ ಭೇಟಿ ನೀಡಿದರು.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now