--ಇಲ್ಲಿ ಜಾಹೀರಾತು--

ಮುಖ್ಯಮಂತ್ರಿ ಕುರ್ಚಿಗಾಗಿ ಇಂದು ದೆಹಲಿಯತ್ತ ಡಿಕೆಶಿ

On: March 7, 2026 2:36 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಭಾನುವಾರ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ನಾಳೆ ಡಿ.ಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಕಲಬುರಗಿಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ. ಉದ್ಘಾಟನೆ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಕಲಬುರಗಿಯಿಂದ ದೆಹಲಿಗೆ ಪ್ರಯಾಣಿಸಲಿದ್ದಾರೆ. ನೀರಾವರಿ ಇಲಾಖೆ ಕೆಲವು ಕೆಲಸದ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೂ ಬಜೆಟ್ ಮಂಡನೆ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷರ ಜೊತೆ ಡಿಕೆಶಿ ದೆಹಲಿಗೆ ಹೋಗುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ಕುರ್ಚಿ ಪಡೆಯಲು ಮುಂದಾಗಿರುವ ಡಿಕೆಶಿ ನಡೆ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now