--ಇಲ್ಲಿ ಜಾಹೀರಾತು--

ಲೋಕಾಯುಕ್ತ ಬಲೆಗೆ ಬಿದ್ದ ಜಿಲ್ಲಾಸ್ಪತ್ರೆ ವೈದ್ಯೆ, ಸಹಾಯಕ

On: March 9, 2026 2:45 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ತುಮಕೂರು: ನೇತ್ರ ಶಸ್ತ್ರಚಿಕಿತ್ಸೆ ಮಾಡಿ ಲೆನ್ಸ್ ಅಳವಡಿಸಲು 6 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾಸ್ಪತ್ರೆ ವೈದ್ಯೆ ಸವಿತಾ, ಸಹಾಯಕನಾದ ಹೊರಗುತ್ತಿಗೆ ನೌಕರ ಮನೋಜ್ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನಗರದ ಉಪ್ಪಾರಹಳ್ಳಿಯ ಆಟೊ ಚಾಲಕ ಅವಿನಾಶ್ ಅವರು ತಾಯಿ ಮಂಗಳಮ್ಮ ಅವರನ್ನು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ತಜ್ಞ ವೈದ್ಯೆ ಸವಿತಾ ಕಣ್ಣು ಪರೀಕ್ಷಿಸಿ ಶಸ್ತ್ರಚಿಕಿತ್ಸೆ ಮಾಡಲು 6 ಸಾವಿರ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಚಿಕಿತ್ಸೆ ಉಚಿತವಾಗಿ ಮಾಡುತ್ತಾರಲ್ಲ ಎಂದು ಅವಿನಾಶ್ ಪ್ರಶ್ನಿಸಿದ್ದರು. ಉಚಿತವಾಗಿ ಚಿಕಿತ್ಸೆ ಪಡೆಯಬೇಕಾದರೆ ಬೆಂಗಳೂರಿನ ಮಿಂಟೊ ಆಸ್ಪತ್ರೆಗೆ ಹೋಗಬೇಕು ಎಂದು ಡಾ.ಸವಿತಾ ಹೇಳಿದ್ದರು.
ಈ ಬಗ್ಗೆ ಅವಿನಾಶ್ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಜಿಲ್ಲಾ ಆಸ್ಪತ್ರೆಯಲ್ಲಿ ಸವಿತಾ ಸೂಚನೆ ಮೇರೆಗೆ ಮನೋಜ್ ಲಂಚದ ಹಣ ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now