--ಇಲ್ಲಿ ಜಾಹೀರಾತು--

ಗಾಂಜಾ ಮಾರಾಟ: ಇಬ್ಬರಿಗೆ 4 ವರ್ಷ ಶಿಕ್ಷೆ

On: March 11, 2026 2:45 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮೈಸೂರು:
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರಿಗೆ ನ್ಯಾಯಾಲಯ 4 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಮಹಮದ್ ಷಬಾಜ್ ಹಾಗೂ ಫರ್ಮಾನ್ ಪಾಷಗೆ ಮೈಸೂರಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಾಲ್ಕು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಬೆಂಗಳೂರು-ಮೈಸೂರು ರಸ್ತೆಯ ಅಜೀಜ್ ಸೇಠ್ ವೃತ್ತದ ಸಿದ್ದಿಖ್ ನಗರಕ್ಕೆ ಹೋಗುವ ಮರದ ಬಳಿಯಲ್ಲಿ 2023ರ ಫೆ.18ರಂದು ಸ್ಕೂಟರ್‌ನಲ್ಲಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಮಹಮದ್ ಷಬಾಜ್ ಹಾಗೂ ಫರ್ಮಾನ್‌ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ 40 ಸಾವಿರ ಮೌಲ್ಯದ 1 ಕೆಜಿ 560 ಗ್ರಾಂ. ಗಾಂಜಾ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ.ಹೇಮಂತ್ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಎಸ್.ಬಿ. ವಿಜಯಲಕ್ಷ್ಮೀ ವಾದ ಮಂಡಿಸಿದ್ದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now