--ಇಲ್ಲಿ ಜಾಹೀರಾತು--

ಪ್ರಿಯಕರನ ಜತೆ ಸೇರಿ ಪತಿ ಕೊಲೆ: ಪತ್ನಿ ಸೇರಿದಂತೆ ಮೂವರ ಬಂಧನ

On: March 11, 2026 2:47 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮಂಡ್ಯ:
ಅರ್ಚಕನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಕೊಲೆಗೈದಿದ್ದ ಪತ್ನಿ ಹಾಗೂ ಇತರ ಮೂವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮರಳಗಾಲ ಗ್ರಾಮದ ಬಳಿ ಕೊಲೆ ನಡೆದಿತ್ತು. ಮೃತರನ್ನು ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದೆ. ಅವರು ಸ್ಥಳೀಯ ದೇವಾಲಯದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ಅವರನ್ನು ಹತ್ಯೆಗೈದ ಆರೋಪದಡಿ ಪತ್ನಿ ಶಾಲಿನಿ, ಆಕೆಯ ಪ್ರೇಮಿ ಹರೀಶ ಹಾಗೂ ಎಂಆರ್ ಸಂತೋಷ್ ಕುಮಾರ್, ಬಿ.ಗಣೇಶ್ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ತನಿಖೆ ಪ್ರಕಾರ, ಶಾಲಿನಿ ಹಾಗೂ ಅದೇ ಗ್ರಾಮದ ಹರೀಶ್ ನಡುವೆ ಅಕ್ರಮ ಸಂಬAಧವಿತ್ತು. ಸುಮಾರು ಒಂದೂವರೆ ವರ್ಷದ ಹಿಂದೆ ಸಿದ್ದಲಿಂಗಪ್ಪ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಬಳಿಕ ಪತ್ನಿಗೆ ಹಲವಾರು ಬಾರಿ ಬುದ್ಧಿವಾದ ಹೇಳಿದ್ದರೂ ಸಂಬAಧ ಮುರಿಯಲು ಒಪ್ಪಿರಲಿಲ್ಲ. ಆದರೆ ಈ ವಿಷಯದಿಂದ ಬೇಸತ್ತ ಶಾಲಿನಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಮುಗಿಸುವ ಯೋಜನೆ ರೂಪಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಸಿದ್ದಲಿಂಗಪ್ಪ ಶೆಟ್ಟಿಹಳ್ಳಿಯ ಗಣಪತಿ ದೇವಾಲಯಕ್ಕೆ ಮಾ.6ರಂದು ಪೂಜೆಯ ಕೆಲಸಕ್ಕಾಗಿ ತೆರಳಿದ್ದರು. ಈ ವೇಳೆ ಶಾಲಿನಿ ತನ್ನ ಪ್ರಿಯಕರ ಹರೀಶ್‌ಗೆ ಮೆಸೇಜ್ ಮೂಲಕ ಮಾಹಿತಿ ನೀಡಿದ್ದಳು. ನಂತರ ಬೈಕ್‌ನಲ್ಲಿ ನಾಲೆ ಏರಿ ಮನೆಗೆ ಮರಳುತ್ತಿದ್ದ ಸಿದ್ದಲಿಂಗಪ್ಪನನ್ನು ಹರೀಶ್ ಹಾಗೂ ಅವನ ಇಬ್ಬರು ಸ್ನೇಹಿತರು ಮಾರ್ಗಮಧ್ಯೆ ಅಡ್ಡಗಟ್ಟಿದರು. ಬಳಿಕ ದೊಣ್ಣೆಯಿಂದ ತಲೆಗೆ ಹೊಡೆದು ಹತ್ಯೆಗೈದಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now