--ಇಲ್ಲಿ ಜಾಹೀರಾತು--

ಕೋಳಿ ಮೊಟ್ಟೆ ಬೆಲೆ ಭಾರೀ ಕುಸಿತ: ಕೊಲ್ಲಿ ರಾಷ್ಟ್ರಗಳ ಯುದ್ಧದಿಂದ ಕರ್ನಾಟಕದ ಮೇಲೆ ಎಫೆಕ್ಟ್

On: March 12, 2026 2:37 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಮೈಸೂರು: ಕೆಲವು ದಿನಗಳಿಂದ ಕೋಳಿ ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ. 7.5 ರೂ. ಇದ್ದ ಮೊಟ್ಟೆ ಬೆಲೆ ಈಗ 5 ರೂ.ಗೆ ಇಳಿಕೆಯಾಗಿದೆ. ಇದು ಗ್ರಾಹಕರಿಗೆ ಸಂತಸ ತಂದಿದೆ. ಆದರೆ, ಕೋಳಿ ಸಾಕಾಣಿಕೆದಾರರಲ್ಲಿ ಆತಂಕ ಮೂಡಿಸಿದೆ.
ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆಯಲ್ಲಿ ರಫ್ತು ವ್ಯತ್ಯಯ, ಹಬ್ಬದ ಕಾಲದ ಬೇಡಿಕೆ ಕುಸಿತ ಹಾಗೂ ಬೇಸಿಗೆ ಪರಿಣಾಮ ಮೊಟ್ಟೆ ಬೆಲೆ ಇಳಿಕೆಗೆ ಕಾರಣವಾಗಿದೆ ಎನ್ನಲಾಗಿದೆ. ಕಳೆದ ಸುಮಾರು 15 ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮೊಟ್ಟೆ ದರದಲ್ಲಿ ದೊಡ್ಡ ಮಟ್ಟದ ಇಳಿಕೆ ಕಂಡುಬAದಿದೆ ಎಂದು ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿ (ಎನ್‌ಇಸಿಸಿ) ತಿಳಿಸಿದೆ.
ರಾಜ್ಯದಲ್ಲಿ ಪ್ರತಿದಿನ ಸುಮಾರು 2.2 ಕೋಟಿ ಮೊಟ್ಟೆಗಳು ಉತ್ಪಾದನೆಯಾಗುತ್ತವೆ. ಈ ಮೊಟ್ಟೆಗಳ ಒಂದು ಭಾಗವನ್ನು ತಮಿಳುನಾಡಿನ ನಾಮಕ್ಕಲ್ ಕೇಂದ್ರಕ್ಕೆ ಕಳುಹಿಸಿ ಅಲ್ಲಿಂದ ಗಲ್ಫ್ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ನಾಮಕ್ಕಲ್ ನಿಂದ ದಿನಕ್ಕೆ ಸುಮಾರು 70 ಲಕ್ಷದಿಂದ 1 ಕೋಟಿ ಮೊಟ್ಟೆಗಳು ಗಲ್ಫ್ ದೇಶಗಳಿಗೆ ರಫ್ತಾಗುತ್ತವೆ.
ರಾಜ್ಯದಲ್ಲಿ ಹೊಸಪೇಟೆ ಮೊಟ್ಟೆ ಉತ್ಪಾದನೆಯಲ್ಲಿ ಪ್ರಮುಖ ಸ್ಥಾನದಲ್ಲಿದೆ. ನಂತರದ ಸ್ಥಾನವನ್ನು ಮೈಸೂರು ಪಡೆದುಕೊಂಡಿದೆ. ಆದರೆ, ಈಗ ಯುದ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ರಫ್ತು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆಗಳ ಸಂಗ್ರಹ ಹೆಚ್ಚಾಗಿದೆ. ಇದೂ ಕೂಡ ಬೆಲೆ ಕುಸಿತಕ್ಕೆ ಕಾರಣವಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now