
ಮಡಿಕೇರಿ: ಕೊಡಗಿನಲ್ಲಿ ಕಾಡಾನೆ ದಾಳಿ ಪ್ರಕರಣ ಹೆಚ್ಚುತ್ತಿವೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಕಾಫಿ ಬೆಳೆಗಾರನ ಮೇಲೆ ಆನೆ ದಾಳಿ ಮಾಡಿದೆ. ಆನೆ ದಾಳಿಗೊಳಗಾದ ರೈತ ಗಣಪತಿ (49) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಜಲಜಾಕ್ಷಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟಿದ್ದರು.
ಆನೆ ದಾಳಿಗೆ ರೈತ ಬಲಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


