--ಇಲ್ಲಿ ಜಾಹೀರಾತು--

16ರಂದು ಸಿಎಂ ‘ಡಿನ್ನರ್ ಪಾರ್ಟಿ’

On: March 13, 2026 2:31 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 16ರಂದು ಕಾಂಗ್ರೆಸ್ ಸಚಿವರು ಮತ್ತು ಶಾಸಕರಿಗಾಗಿ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಡಿನ್ನರ್ ಸಭೆ ಆಯೋಜಿಸಿರುವುದು ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಕಾಂಗ್ರೆಸ್ ಪಕ್ಷದ ಒಳರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ.
ಮುಂದಿನ ರಾಜಕೀಯ ತಂತ್ರಗಳ ಕುರಿತು ಡಿನ್ನರ್ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ ಹಾಗೂ ಒಳಮೀಸಲಾತಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಮೂಲಗಳು ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ಸಚಿವರು ಮತ್ತು ಶಾಸಕರಿಗಾಗಿ ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು. ಈ ಬೆನ್ನಲ್ಲೇ ಮಾರ್ಚ್ 12ರಂದು ಸಿಎಂ ಮತ್ತು ಡಿಸಿಎಂ ಬಣಗಳಿಗೆ ಸೇರಿರುವ ಕೆಲವು ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now