--ಇಲ್ಲಿ ಜಾಹೀರಾತು--

ಮಕ್ಕಳ ಆತ್ಮಹತ್ಯೆ ತಡೆಗೆ ಕ್ರಮ

On: March 13, 2026 2:48 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು:
ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಮಾಹಿತಿ ನೀಡಿದರು.
ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಪ್ರಶ್ನೆ ಕೇಳಿದರು. 3 ವರ್ಷಗಳಲ್ಲಿ ವಸತಿ ನಿಲಯಗಳಲ್ಲಿ ನೂರಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮ ವೈಫಲ್ಯ, ವೈಯಕ್ತಿಕ ಕಾರಣ ಸೇರಿ ಹಲವು ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳುತ್ತಿದ್ದಾರೆ. 7- 8ನೇ ತರಗತಿ ಮಕ್ಕಳೇ ಜಾಸ್ತಿ ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಆತ್ಮಹತ್ಯೆ ತಡೆಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಇದಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಉತ್ತರ ನೀಡಿ, ಕಳೆದ 3 ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ, ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಶಾಲೆ-10, ವಸತಿ ಶಾಲೆಯಲ್ಲಿ 5 ಹಾಗೂ ವಿದ್ಯಾರ್ಥಿ ನಿಲಯದಲ್ಲಿ 12 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ಪ್ರೇಮ ವೈಫಲ್ಯ, ವೈಯಕ್ತಿಕ, ಮಾನಸಿಕ ಖಿನ್ನತೆ, ಆನ್ ಲೈನ್ ಜೂಜಾಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ತಿಳಿಸಿದ್ದಾರೆ.
ಆತ್ಮಹತ್ಯೆ ತಡೆಗೆ ನೀತಿ ತರುತ್ತಿದ್ದೇವೆ. ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಗೃಹ ಇಲಾಖೆ, ಆರೋಗ್ಯ, ತಹಶೀಲ್ದಾರ್ ಸೇರಿ ಹಲವರನು ಜಾಗೃತಿಗೆ ಬಳಸಿಕೊಳ್ತೀವಿ. ಸಮಿತಿ ವರದಿ ಬಂದ ಕೂಡಲೇ ಆತ್ಮಹತ್ಯೆ ತಡೆ ನೀತಿ ಜಾರಿ ಮಾಡ್ತೀವಿ. ಜಾಗೃತಿ ಮೂಡಿಸೋ ಕೆಲಸ ಮಾಡ್ತೀವಿ ಎಂದು ತಿಳಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now