
ಚಾಮರಾಜನಗರ: ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಬಳಿ ನಡೆದಿದೆ. ಕೇರಳ ಮೂಲದವರು ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು ಎರಡು ವರ್ಷದ ಹುಲಿ ಸಾವಿಗೀಡಾಗಿದೆ.
ಕೇರಳ ಮೂಲದ ಪರಮೇಶ್ ಎಂಬವರು ಸ್ಥಳೀಯರ ಜಮೀನನ್ನು ಗುತ್ತಿಗೆ ಪಡೆದಿದ್ದರು. ಈ ಭಾಗದಲ್ಲಿ ಹುಲಿ, ಚಿರತೆ ಸಂಚಾರ ಹೆಚ್ಚಿದೆ. ಈ ಹಿನ್ನೆಲೆ ಅಧಿಕಾರಿಗಳು ಥರ್ಮಲ್ ಡ್ರೋನ್ ಹಾರಿಸುವಾಗ ಹುಲಿ ಸತ್ತು ಬಿದ್ದಿರುವುದು ಗೊತ್ತಾಗಿದೆ. ಸ್ಥಳಕ್ಕೆ ಪೊಲೀಸ್, ಅರಣ್ಯ ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಹಿಂದೆ ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷಕ್ಕೆ 6 ಹುಲಿ, ಬಿಆರ್ಟಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಉರುಳಿಗೆ ಒಂದು ಹುಲಿ ಸಾವನ್ನಪ್ಪಿತ್ತು.
ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


