
ಮಂಡ್ಯ: ಈಜಾಡಲು ಹೋಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್ (15) ಮೃತ ಬಾಲಕ.
ದಳವಾಯಿ ಕೋಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ ಶಾಲೆಗೆ ರಜೆ ಇದ್ದ ಕಾರಣ ತನ್ನ 4 ಮಂದಿ ಸ್ನೇಹಿತರೊಂದಿಗೆ ಈಜಾಡಲು ತೆರಳಿದ್ದ. ಭಾನುವಾರ ಸಂಜೆಯವರೆಗೂ ಮನೆಗೆ ಬಾಲಕ ಹಿಂದಿರುಗಿರಲಿಲ್ಲ. ಪೋಷಕರು ಬಾಲಕನ ಪತ್ತೆಗಾಗಿ ಶೋಧ ನಡೆಸಿದ್ದರು. ನಂದೀಪುರ ಗ್ರಾಮದ ರಾಜೇಗೌಡ ಅವರ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಸೋಮವಾರ ಬೆಳಿಗ್ಗೆ ಬಾಲಕನ ಮೃತದೇಹ ಪತ್ತೆಯಾಗಿದೆ. ಈ ಸಂಬAಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


