
ದಾವಣಗೆರೆ: ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿರುವುದು ಕಾಂಗ್ರೆಸ್ ಗೆ ತಲೆನೋವಾಗಿ ಪರಿಣಮಿಸಿದೆ.
ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಸಾಧಿಕ್, ನಾನು ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಅವರು ಸವಾಲು ಹಾಕಿದ್ದಾರೆ. ಅಹಿಂದ ಸಮುದಾಯದ ಬೆಂಬಲದಿAದ ಈ ಬಾರಿ ಚುನಾವಣೆ ಕಣದಲ್ಲಿ ಇದ್ದೇನೆ. ಅಹಿಂದ ಸಮುದಾಯ ಬಿಟ್ಟು ನಾನಿಲ್ಲ. ಅವರ ಆಶೀರ್ವಾದ ನನ್ನ ಮೇಲೆ ಇದೆ ಎಂದು ತಿಳಿಸಿದ್ದಾರೆ.
ನಾಮಪತ್ರ ವಾಪಸ್ ಪಡೆಯಲ್ಲ: ಸಾಧಿಕ್

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


