
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಾ.27ರಂದು ಸಂಜೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುವರು. ರಾಜ್ಯಗಳ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲಾಗುತ್ತದೆ.
ಎಲ್ಲಾ ಸಿಎಂಗಳ ಜೊತೆಗೆ ಪ್ರಧಾನಿ ನಡೆಸುವ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವರೇ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಈ ಕುರಿತು ಮುಖ್ಯಮಂತ್ರಿ ಕಚೇರಿಯಿಂದ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ಬಂದಿಲ್ಲ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊರತಾಗಿಯೂ ದೇಶಾದ್ಯಂತ ಇಂಧನ ಪೂರೈಕೆ ಸ್ಥಿರವಾಗಿದೆ ಮತ್ತು ಚಿಲ್ಲರೆ ಇಂಧನ ಮಳಿಗೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ. ವದಂತಿಗಳಿಗೆ ಕಿವಿಗೂಡಬೇಡಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇಂದು ಎಲ್ಲಾ ಸಿಎಂಗಳ ಜೊತೆ ಮೋದಿ ಸಂವಾದ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


