
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ತೆರೆಯದಿದ್ದರೆ ಇರಾನ್ ಘನಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ವ್ಯವಹಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನಿನ ಎಲ್ಲಾ ವಿದ್ಯುತ್ ಉತ್ಪಾದನಾ ಸ್ಥಾವರಗಳು, ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸ್ಫೋಟಿಸಿ ಸಂಪೂರ್ಣವಾಗಿ ನಾಶಮಾಡುತ್ತೇನೆ ಎಂದು ಟ್ರೂಥ್ ಪೋಸ್ಟ್ನಲ್ಲಿ ಟ್ರಂಪ್ ಹೇಳಿದ್ದಾರೆ. ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಗಂಭೀರ ಚರ್ಚೆ ನಡೆಸುತ್ತಿದೆ. ಶೀಘ್ರದಲ್ಲೇ ಒಪ್ಪಂದಕ್ಕೆ ಬರದಿದ್ದರೆ ಇರಾನಿನ ಮೂಲಸೌಕರ್ಯ ಘಟಕಗಳನ್ನೇ ನಾಶ ಮಾಡುವುದಾಗಿ ಟ್ರಂಪ್ ಗುಡುಗಿದ್ದಾರೆ.
ಹಾರ್ಮುಜ್ ತೆರೆಯದಿದ್ದರೆ ಇರಾನ್ ನಾಶ: ಟ್ರಂಪ್

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


