ರಾಜ್ಯ ಸರ್ಕಾರದಿಂದ ತೆರಿಗೆ ಏರಿಕೆ ಬಿಸಿ ಕೇಂದ್ರದ ಜಿಎಸ್ ಟಿ ಬರೆ
ಬೆಂಗಳೂರು: ಹೊಸ ಆರ್ಥಿಕ ವರ್ಷ ಏ.1ರಿಂದ ಅನ್ವಯ ಆಗುವಂತೆ ಜನರ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಯ ಹೊರೆ ಏರಲು ಸ್ಪರ್ಧೆಯಲ್ಲಿ ಮುಂದಾಗಿವೆ. ಹೊಸ ಆರ್ಥಿಕ ವರ್ಷದ ಆರಂಭವಾಗುವ ನಾಳೆಯಿಂದ ಜನ ಜೀವನವೂ ದುಬಾರಿಯಾಗಲಿದೆ.
ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ಅನ್ವಯವಾಗುವಂತೆ ರಾಜ್ಯ ಸರ್ಕಾರ ವಿದ್ಯುತ್ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆಯ ನೇರ ಪರಿಣಾಮ ಬೀರಲಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಏ.1ರಿಂದ ಅನ್ವಯವಾಗುವಂತೆ ನೀರಿನ ದರವನ್ನು ಶೇ.3ರಷ್ಟು ಹೆಚ್ಚಳ ಮಾಡಲಿದೆ. ಇದರಿಂದ ಬೆಂಗಳೂರಿಗರಿಗೆ ಮತ್ತೊಂದು ಹೊರೆ ಬೀಳಲಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್ಸಿ) ಸಾಕಷ್ಟು ಅಳೆದು ತೂಗಿ ಕೊನೆಗೂ ವಿದ್ಯುತ್ ದರವನ್ನು ಪರಿಷ್ಕರಿಸಿದೆ. ಕೈಗಾರಿಕೆಗಳು ಮತ್ತು ವಾಣಿಜ್ಯ ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಲಿದೆ. ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳಿಗೆ (ಎಸ್ಕಾಂ) ಹಿಂದಿನ ಹಣಕಾಸು ವರ್ಷದಲ್ಲಿಆದಾಯ ಖೋತಾ ಆಗಿದ್ದು, ವಿದ್ಯುತ್ ದರ ಹೆಚ್ಚಳದ ಮೂಲಕ ಈ ಆರ್ಥಿಕ ನಷ್ಟ ಸರಿದೂಗಿಸುವಂತೆ ಐದೂ ಎಸ್ಕಾಂಗಳು ಕೆಇಆರ್ಸಿಗೆ ಪ್ರಸ್ತಾವ ಸಲ್ಲಿಸಿದ್ದವು. ಅಂತಿಮವಾಗಿ ಎಸ್ಕಾಂಗಳ ಒತ್ತಾಯಕ್ಕೆ ಮಣಿದಿರುವ ಕೆಇಆರ್ಸಿ, 2025-26ನೇ ಸಾಲಿಗೆ ಪೂರ್ವಾನ್ವಯವಾಗುವಂತೆ ವಿದ್ಯುತ್ ದರ ಪರಿಷ್ಕರಿಸಿ ಮಂಗಳವಾರ ಆದೇಶ ಹೊರಡಿಸಿದೆ.
ಇಂದಿನಿಂದ ‘ದುಬಾರಿ ದುನಿಯಾ’

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


