
ಚಿತ್ರದುರ್ಗ: ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಗೆಳತಿಯರು ಅಪಪ್ರಚಾರ ನಡೆಸಿದ್ದ ಹಿನ್ನೆಲೆಯಲ್ಲಿ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಗರದ ಬಸವ ಲೇಔಟ್ನಲ್ಲಿ ನಡೆದಿದೆ. ನಿಖಿತಾ (23) ನೇಣಿಗೆ ಶರಣಾದ ವಿದ್ಯಾರ್ಥಿನಿ. ಡೆತ್ ನೋಟ್ ಬರೆದಿಟ್ಟು ನಿಖಿತಾ ನೇಣಿಗೆ ಶರಣಾಗಿದ್ದಾಳೆ. ಅಧ್ಯಾಪಕರೊಬ್ಬರ ಜೊತೆ ಸಂಬAಧ ಕಲ್ಪಿಸಿ ಅಪಪ್ರಚಾರ ಮಾಡುತ್ತಿದ್ದ ಹಿನ್ನೆಲೆ ಡೆತ್ನೋಟ್ನಲ್ಲಿ ಅಧ್ಯಾಪಕ ರಾಜು, ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರು ಬರೆದಿಟ್ಟು ನಿಖಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅವರ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಪ್ರಚಾರಕ್ಕೆ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


