
ಚಿಕ್ಕಬಳ್ಳಾಪುರ: ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಟಿಕ್ಕಿ ರಕ್ಷಿತಾ ರೆಡ್ಡಿ (23) ಹಾಗೂ ಪವನ್ ರೆಡ್ಡಿ (30) ಮೃತರು. ರಕ್ಷಿತಾ ರೆಡ್ಡಿ ಪತಿ ರಾಜಶೇಖರ್ ರೆಡ್ಡಿ ಸ್ಥಿತಿ ಗಂಭೀರವಾಗಿರುವ ಘಟನೆ ತಾಲೂಕಿನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಶೆಟ್ಟಿಗೆರೆ ಕ್ರಾಸ್ ಬಳಿ ಸಂಭವಿಸಿದೆ.
ರಕ್ಷಿತಾ ಹಾಗೂ ರಾಜಶೇಖರ್ ದಂಪತಿ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜನಿಯರ್ ಆಗಿದ್ದರು. ಇಬ್ಬರೂ ತಮ್ಮ ಸಂಬಂಧಿಪವನ್ ರೆಡ್ಡಿ ಜೊತೆ ಕಾರಿನಲ್ಲಿ ಅನಂತಪುರದ ಸ್ವಗ್ರಾಮ ಅವಳಗಿಗೆ ತೆರಳುತ್ತಿದ್ದರು. ಈ ವೇಳೆ ಮುಂದೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಪತ್ನಿ ಹಾಗೂ ಪವನ್ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪತಿ ರಾಜಶೇಖರ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿಗೆ ಕಾರು ಡಿಕ್ಕಿ: ಇಬ್ಬರು ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


