
ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಇನ್ನೋವಾ ಕಾರು ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೇಲೂರು ತಾಲೂಕಿನ ಲಿಂಗಾಪುರ ಗ್ರಾಮದ ಬಳಿ ನಡೆದಿದೆ. ಬೇಲೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ರಸ್ತೆ ತಿರುವಿನಲ್ಲಿ ನಿಯಂತ್ರಣ ಸಿಗದೇ ಅಡಿಕೆ ತೋಟಕ್ಕೆ ಬಿದ್ದಿದೆ. ಕಾರು ಚಾಲಕ ಮಹಮದ್ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಉರುಳಿದ ಕಾರು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


