--ಇಲ್ಲಿ ಜಾಹೀರಾತು--

ಮುಸ್ಲಿಮರಿಗೆ ಮೀಸಲಾತಿ ನೀಡಲ್ಲ: ಅಮಿತ್ ಶಾ

On: April 16, 2026 2:11 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನವದೆಹಲಿ: ಮುಸ್ಲಿಮರಿಗೆ ಮೀಸಲಾತಿ ನೀಡುವುದಿಲ್ಲ. ಒಂದು ವೇಳೆ ಮೀಸಲಾತಿ ನೀಡಿದರೆ ಅದು ಧರ್ಮಾಧರಿತ ಮೀಸಲಾತಿ ಎನಿಸಿಕೊಳ್ಳುತ್ತದೆ. ಧರ್ಮಾಧರಿತ ಮೀಸಲಾತಿ ನೀಡುವುದಕ್ಕೆ ಸಂವಿಧಾನದಲ್ಲಿ ಅವಕಾಶವೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಲೋಕಸಭೆಯಲ್ಲಿ ಗುರುವಾರ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುತ್ತಿದ್ದೇವೆ ಎಂದರೆ ಮುಸ್ಲಿಮರಿಗೂ ಮೀಸಲಾತಿ ನೀಡುತ್ತಿದ್ದೇವೆ ಎಂದು ಅರ್ಥವಲ್ಲ ಎಂದು ಹೇಳಿದರು.
ಸಂಸದರಾದ ಅಖಿಲೇಶ್ ಯಾದವ್ ಹಾಗೂ ಧರ್ಮೆಂದ್ರ ಯಾದವ್ ಅವರು ಮುಸ್ಲಿಮರಿಗೆ ಮೀಸಲಾತಿ ಬೇಕು ಎಂದು ಹೇಳಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿ ಸುಮಾರು 40 ನಿಮಿಷ ಮಾತನಾಡಿದ ಅಮಿತ್ ಶಾ, ಸಮಾಜವಾದಿ ಸೇರಿದಂತೆ ವಿರೋಧ ಪಕ್ಷದ ನಾಯಕರ ಕಾಲೆಳೆದರು. ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೊಳಿಸಲು ನಾವು ಸಿದ್ಧವಾಗಿದ್ದೇವೆ. ಸಮಾಜವಾದಿ ಪಕ್ಷ ಬೇಕಿದ್ದರೆ ತನ್ನ ಎಲ್ಲ ಕ್ಷೇತ್ರಗಳಲ್ಲಿ ಮುಸ್ಲಿಂ ಮಹಿಳೆಯರಿಗೇ ಟಿಕೆಟ್ ನೀಡಲಿ ಎಂದು ಕಿಚಾಯಿಸಿದರು.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now