--ಇಲ್ಲಿ ಜಾಹೀರಾತು--

ವಿನಯ್ ಕುಲಕರ್ಣಿ ಇದ್ದ ಬಸ್ ನಲ್ಲಿ ಬೆಂಕಿ, ಹೊಗೆ

On: April 16, 2026 2:20 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತಿತರರನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರಿಸುವಾಗ ಬಸ್‌ ನಲ್ಲಿ ತಾಂತ್ರಿಕ ದೋಷ ಉಂಟಾಗಿ ದಟ್ಟ ಹೊಗೆ ಆವರಿಸಿದ ಘಟನೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸಮೀಪದಲ್ಲಿ ಸಂಭವಿಸಿದೆ.
ಬಸ್‌ ನಲ್ಲಿ ಅಕಸ್ಮಿಕವಾಗಿ ತಾಂತ್ರಿಕ ದೋಷ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಬಸ್‌ ನೊಳಗಿದ್ದ ಆರೋಪಿಗಳು ಹಾಗೂ ಸಿಬಿಐ ಭದ್ರತಾ ಸಿಬ್ಬಂದಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ ತಕ್ಷಣವೇ ಎಚ್ಚೆತ್ತುಕೊಂಡ ಸಿಬಿಐ ತಂಡ ಪರಿಸ್ಥಿತಿಯನ್ನು ನಿಯಂತ್ರಿಸಿ ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕರೆದುಕೊಂಡು ಬಂದಿದೆ. ನಂತರ ಬೇರೆ ವಾಹನಗಳ ಮೂಲಕ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now