--ಇಲ್ಲಿ ಜಾಹೀರಾತು--

ಹೊತ್ತಿ ಉರಿದ ಬಸ್ಸು-ಕಾರು: 7 ಮಂದಿ ಸಜೀವ ದಹನ

On: April 17, 2026 2:53 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಭೀಕರ ಅಪಘಾತಕ್ಕೆ ಒಂದೇ ಕುಟುಂಬದವರ ಸಾವು
ಯಾದಗಿರಿ: ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹೊತ್ತಿ ಉರಿದ ಹಿನ್ನೆಲೆಯಲ್ಲಿ 7 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಗುರುವಾರ ನಡೆದಿದೆ.
ರಾಯಚೂರಿನ ಸಿರವಾರದ ಒಂದೇ ಕುಟುಂಬದ ಕೃಷ್ಣಾ ನಾಯಕ್ (56), ಅವರ ಪತ್ನಿ ಅನಂತ ಕಲಾ (45), ನಿಸರ್ಗ (28), ಶರಣಪ್ಪ (35), ಸಿದ್ದಾರ್ಥ (3), ಅಣ್ಣನ ಮಗಳು ಶಶಿಕಲಾ (30) ಹಾಗೂ ಅವರ ಮಗ ಚಂದನ್ ಸಾವನ್ನಪ್ಪಿದ್ದಾರೆ. ಗಾಯಾಳುಗಳಾದ ಆದ್ವಿಕ ಮತ್ತು ಶ್ರೀನಿಧಿಯನ್ನ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿಯಿಂದ ಸುರಪುರದ ತಿಂಥಣಿ ಮೌನೇಶ್ವರ ದೇವಾಲಯಕ್ಕೆ ಕುಟುಂಬಸ್ಥರು ಕಾರಿನಲ್ಲಿ ತೆರಳುತ್ತಿದ್ದರು. ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಹಾಗೂ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ 33 ಜನ ಪ್ರಯಾಣಿಕರು ಪಾರಾಗಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನ ಸುರಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು. ಸುರಪುರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now