--ಇಲ್ಲಿ ಜಾಹೀರಾತು--

ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಚಿಂತನೆ: ಯತ್ನಾಳ್

On: April 20, 2026 2:26 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ. ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಪ್ರಾರಂಭವಾಗಿದೆ ಎಂದು ತಿಳಿಸಿದರು.
ಹಿಂದೂಪರ ಚಿಂತನೆ ಉಳ್ಳವರು ನಿರುದ್ಯೋಗಿ ಯುವಕರನ್ನು, ಅಭಿವೃದ್ಧಿ ಚಿಂತನೆ ಪರ ಇರುವ ಜನರ ಸಭೆ ಮಾಡುತ್ತೇನೆ. ಜನರ ಅಭಿಪ್ರಾಯ ಪಡೆದು ಮುಂದೆ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡುತ್ತೇನೆ. ಚುನಾವಣೆ ಆಯೋಗ ಪಕ್ಷಕ್ಕೆ ಯಾವ ಚಿಹ್ನೆ ಕೊಡುತ್ತಾರೆ ನೋಡಬೇಕು ಎಂದು ಹೇಳಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now