
ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ಗೆ ಇ.ಡಿ ಶಾಕ್ ಕೊಟ್ಟಿದೆ. ಶಾಸಕರ ನಿವಾಸ, ಕಚೇರಿ ಸೇರಿದಂತೆ 17 ಸ್ಥಳಗಳ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಪಾರ ಪ್ರಮಾಣದ ದಾಖಲೆಗಳನ್ನು ವಶಕ್ಕೆ ಪಡೆದಿದ್ದು, ಅವುಗಳ ಪರಿಶೀಲನೆ ನಡೆಸಿದ್ದಾರೆ.
ಬಿಡಿಎ ಅಧ್ಯಕ್ಷರೂ ಆದ ಹ್ಯಾರಿಸ್, ಅವರ ಪುತ್ರ ಮೊಹಮ್ಮದ್ ನಲಪಾಡ್ ಸೇರಿದಂತೆ ಇಬ್ಬರು ಪುತ್ರರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ. ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ಬಿಟ್ ಕಾಯಿನ್ ಅಕ್ರಮ ವಹಿವಾಟು ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಉರುಫ್ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಸಂಬಂಧ ಎನ್.ಎ.ಹ್ಯಾರಿಸ್ ಮತ್ತಿತರರ ನಿವಾಸಗಳ ಮೇಲೆ ದಾಳಿ ನಡೆಸಿದೆ. ಇ.ಡಿ ಬೆಂಗಳೂರು ವಲಯದ 100ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ನಲಪಾಡ್, ಅವರ ತಂದೆ ಎನ್.ಎ.ಹ್ಯಾರಿಸ್ ಅವರ ಶಾಂತಿನಗರದ ನಿವಾಸ, ಬೆಂಗಳೂರಿನ ಗರುಡಾ ಮಾಲ್ ಹಿಂಭಾಗದಲ್ಲಿರುವ ಮನೆಯ ಸೇರಿದಂತೆ 17 ಕಡೆ ದಾಳಿ ನಡೆಸಿದ್ದಾರೆ.
ಶಾಸಕ ಹ್ಯಾರಿಸ್’ಗೆ ಇಡಿ ಶಾಕ್ ಬಿಟ್ ಕಾಯಿನ್ ಹಗರಣ: ಶ್ರೀಕಿ ಜೊತೆ ಹಣಕಾಸು ವಹಿವಾಟು ಹಿನ್ನೆಲೆ ಹ್ಯಾರಿಸ್, ಪುತ್ರ ನಲಪಾಡ್ ಸೇರಿದಂತೆ 17 ಸ್ಥಳಗಳ ಮೇಲೆ ದಾಳಿ







