--ಇಲ್ಲಿ ಜಾಹೀರಾತು--

ಒಳ ಮೀಸಲಾತಿ ಜಾರಿ ಆದೇಶ

On: April 28, 2026 2:58 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

*56,432 ಹುದ್ದೆಗಳ ನೇಮಕಾತಿ: ತರ‍್ತು ಕ್ರಮಕ್ಕೆ ಸೂಚನೆ
ಬೆಂಗಳೂರು: ಒಳ ಮೀಸಲಾತಿ ಜಾರಿಗೊಳಿಸಿ ರಾಜ್ಯ ರ‍್ಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿಯ ಶೇ.15 ಮೀಸಲಾತಿಯಲ್ಲಿ ಪ್ರರ‍್ಗ ಎ (ಎಡಗೈ ಜಾತಿಗಳು) ಮತ್ತು ಪ್ರರ‍್ಗ ಬಿ (ಬಲಗೈ) ತಲಾ ಶೇ.5.25, ಮತ್ತು ಪ್ರರ‍್ಗ ಸಿಗೆ (ಸ್ಪೃಶ್ಯ, ಅಲೆಮಾರಿ ಜಾತಿಗಳು) ಶೇ.4.5ರಷ್ಟು ಒಳ ಮೀಸಲಾತಿ ಜಾರಿ ಮಾಡಲಾಗಿದೆ.
ಈಗಾಗಲೇ ರ‍್ಥಿಕ ಇಲಾಖೆ ಅನುಮೋದನೆ ನೀಡಿರುವ 56,432 ಹುದ್ದೆಗಳ ನೇರ ನೇಮಕಾತಿಗೆ ತರ‍್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಲ್ಲ ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆಯನ್ನೂ ನೀಡಲಾಗಿದೆ.
ಪ್ರರ‍್ಗ ಸಿಗೆ ಲಭ್ಯವಾಗುವ ಹುದ್ದೆಗಳಲ್ಲಿ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶಾತಿ ಸೀಟುಗಳಲ್ಲಿ ಶೇ 20ರಷ್ಟನ್ನು ಪರಿಶಿಷ್ಟ ಜಾತಿಗಳಲ್ಲಿನ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿರಿಸಲಾಗುವುದು. ಒಂದೊಮ್ಮೆ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಸೇರಿದವರು ಲಭ್ಯವಾಗದೇ ಇದ್ದರೆ, ಆ ಹುದ್ದೆಗಳನ್ನು ಹಾಗೂ ಪ್ರವೇಶಾತಿ ಸೀಟುಗಳನ್ನು ಪ್ರರ‍್ಗ ಸಿಯಲ್ಲಿರುವ ಇತರೆ ಜಾತಿಗಳಿಗೆ ನೀಡಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಲು 400 ರೋಸ್ಟರ್ ಬಿಂದುಗಳ ರ‍್ತುಲಗಳನ್ನು ಪಾಲಿಸಲಾಗುವುದು. ಯಾವುದೇ ವೃಂದಲ್ಲಿ ಪರಿಶಿಷ್ಟ ಜಾತಿಯ ರೋಸ್ಟರ್ ಬಿಂದುಗಳು ಮೂರಕ್ಕಿಂತ ಕಡಿಮೆ ಲಭ್ಯವಾಗದೇ ಇದ್ದರೆ, ಪರಿಶಿಷ್ಟ ಜಾತಿಗೆ ಮೀಸಲಾದ ಆ ಹುದ್ದೆಗಳನ್ನು ಪರಿಶಿಷ್ಟ ಜಾತಿ (ಸಾಮಾನ್ಯ) ಎಂದು ಪರಿಗಣಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಹೈಕರ‍್ಟ್ ನೀಡಿರುವ ಮಧ್ಯಂತರ ಆದೇಶದ ಅನ್ವಯ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ 17ರಿಂದ ಶೇ 15ಕ್ಕೆ ಸೀಮಿತಗೊಳಿಸಿ ಒಳ ಮೀಸಲಾತಿ ಜಾರಿಗೊಳಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ರಾಜ್ಯ ರ‍್ಕಾರ ಹೆಚ್ಚಿಸಿರುವ ಶೇ.24ರಷ್ಟು ಮೀಸಲಾತಿ ಪ್ರಮಾಣವನ್ನು ಕರ‍್ಟ್ ಒಪ್ಪಿದರೆ, ಈ ಹೆಚ್ಚುವರಿ ಶೇಕಡಾ 6ರಷ್ಟು ಹುದ್ದೆಗಳನ್ನು ಬ್ಯಾಕ್‌ಲಾಗ್ ಹುದ್ದೆಗಳೆಂದು ಪರಿಗಣಿಸಿ ನೇಮಕಾತಿ ಮಾಡಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ. ಏಪ್ರಿಲ್ 24ರಂದು ನಡೆದಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಹಂಚಿಕೆ ಮಾಡಿ ನರ‍್ಣಯ ಕೈಗೊಳ್ಳಲಾಗಿತ್ತು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now