--ಇಲ್ಲಿ ಜಾಹೀರಾತು--

ತಿರುಪತಿ ಲಡ್ಡುಗೆ 2 ಲಕ್ಷ ಕೆಜಿ ತುಪ್ಪ *ಬಮುಲ್- ಟಿಟಿಡಿ ಒಪ್ಪಂದ: ಡಿ.ಕೆ.ಸುರೇಶ್ ಮಾಹಿತಿ

On: April 29, 2026 2:18 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಬೆಂಗಳೂರು ಸಹಕಾರಿ ಹಾಲು ಒಕ್ಕೂಟದಿಂದ (ಬಮುಲ್) ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪ ಪೂರೈಸುವ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ.
ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ. ಪ್ರತಿದಿನ 11.5ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು.
ಸುಮಾರು 136 ಕೋಟಿ ರೂ. ವೆಚ್ಚದಲ್ಲಿ ತುಪ್ಪ ಪೂರೈಕೆ ಮಾಡುತ್ತೇವೆ. ನಂದಿನಿ ತುಪ್ಪವು ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ಗ್ರಾಹಕರ ವಿಶ್ವಾಸ ಗಳಿಸಿದೆ. ಕಲಬೆರಕೆ ತಡೆಗಟ್ಟಲು ಡಿಜಿಟಲ್ ಲಾಕ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎಂದು ಸುರೇಶ್ ತಿಳಿಸಿದ್ದಾರೆ.
ಬೆಂಗಳೂರು ಡೇರಿ ಆವರಣದಲ್ಲಿ ಬುಧವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ತಿರುಪತಿ ಲಡ್ಡು ಪ್ರಸಾದಕ್ಕಾಗಿ ನಂದಿನಿ ತುಪ್ಪದ ಗುಣಮಟ್ಟವನ್ನು ಪರಿಗಣಿಸಿ, ಟಿಟಿಡಿ ಹೆಚ್ಚಿನ ಪ್ರಮಾಣದಲ್ಲಿ ತುಪ್ಪವನ್ನು ಪೂರೈಸಲು ಬೇಡಿಕೆ ಇಟ್ಟಿದೆ. ಕೆಎಂಎಫ್ ದಿನಕ್ಕೆ ಒಂದು ಕೋಟಿಗೂ ಹೆಚ್ಚು ಲೀಟರ್ ಹಾಲು ಸಂಗ್ರಹಿಸುತ್ತಿದೆ. ಬಮೂಲ್‌ನಲ್ಲಿ 17.5 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು 22ರಿಂದ 33 ಲಕ್ಷ ಲೀಟರ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಮರಳಿರುವುದು ಕನ್ನಡಿಗರಿಗೆ ಮತ್ತೊಂದು ಹೆಮ್ಮೆ ತಂದಿದೆ. ರಾಜ್ಯದ ಹಾಲು ಉತ್ಪಾದಕರಿಗೆ ಹೊಸ ಆತ್ಮವಿಶ್ವಾಸ ತುಂಬಿದೆ ಎಂದು ಹೇಳಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now