--ಇಲ್ಲಿ ಜಾಹೀರಾತು--

ಇಬ್ಬರು ಮಕ್ಕಳ ಕೊಲೆ ಮಾಡಿ ತಂದೆ ಆತ್ಮಹತ್ಯೆ

On: May 2, 2026 2:30 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕುಣಿಗಲ್: ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಅರ್ಚಕನೊಬ್ಬ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಮಲ್ಲೆಶ್ವರ ಸ್ವಾಮಿ ದೇವಸ್ಥಾನದ ಅರ್ಚಕ ಶಿವಣ್ಣ (40) ಎಂದು ಗುರುತಿಸಲಾಗಿದೆ. ಅವರು ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ್ (5) ಅವರನ್ನು ಕತ್ತುಹಿಸುಕಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಶಿವಣ್ಣ ಅವರ ಪತ್ನಿ ಕಾವ್ಯಾ (35) ಬೇರೊಬ್ಬರ ಜತೆಗೆ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಕಾರಣಕ್ಕೆ ಇಬ್ಬರ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ಕೆಲವು ದಿನಗಳಿಂದ ಕಾವ್ಯಾ ಕೊತ್ತಗೆರೆ ಹೋಬಳಿಯ ಕುರುಡಿಹಳ್ಳಿಯ ತವರು ಮನೆಗೆ ಹೋಗಿದ್ದರು.
ಶುಕ್ರವಾರ ಸಂಜೆ ಶಿವಣ್ಣ ಇಬ್ಬರು ಮಕ್ಕಳನ್ನು ವಾಪಸ್ ಆಲ್ಕೆರೆಗೆ ಕರೆದುಕೊಂಡು ಬಂದಿದ್ದರು. ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಅಕ್ಕಪಕ್ಕದ ಮನೆಯವರು ಹೋಗಿ ನೋಡಿದಾಗ ಆತ್ಮಹತ್ಯೆ ವಿಚಾರ ಗೊತ್ತಾಗಿದೆ. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now