--ಇಲ್ಲಿ ಜಾಹೀರಾತು--

ಉಪ ಸಮರದಲ್ಲಿ ಕಾಂಗ್ರೆಸ್ ಗೆಲುವು

On: May 4, 2026 2:35 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


*ಬಾಗಲಕೋಟೆ, ದಾವಣಗೆರೆಯಲ್ಲೂ ಬಿಜೆಪಿಗೆ ಮುಖಭಂಗ
ಬಾಗಲಕೋಟೆ: ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುವ ಮೂಲಕ ತನ್ನ ಸ್ಥಾನಗಳನ್ನು ಉಳಿಸಿಕೊಂಡಿದೆ.
ಬಾಗಲಕೋಟೆಯಲ್ಲಿ ಎಚ್.ವೈ.ಮೇಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ವೀರಭದ್ರಯ್ಯ ಚರಂತಿಮಠ ವಿರುದ್ಧ 22,332 ಮತಗಳ ಅಂತರದಿAದ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದುಕೊಂಡಿದೆ.
ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪ್ರಬಲ ಪೈಪೋಟಿ ನೀಡಿದ್ದರೂ ಅಂತಿಮವಾಗಿ ಸೋಲುಂಡಿದ್ದಾರೆ. ಎಚ್.ವೈ.ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಮೇಟಿ ಪುತ್ರ ಉಮೇಶ್ ಅವರನ್ನು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಉಮೇಶ್ ಮೇಟಿ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.
ಎಚ್.ವೈ.ಮೇಟಿ ಪುತ್ರ ಉಮೇಶ್ ಮೇಟಿ 98,919 ಮತಗಳನ್ನು ಪಡೆದರು. ಬಿಜೆಪಿಯ ಮಾಜಿ ಶಾಸಕ ವೀರಭದ್ರಯ್ಯ ಚರಂತಿಮಠ 76,587 ಮತಗಳನ್ನು ಪಡೆದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಬಾಗಲಕೋಟೆಯಲ್ಲಿ ಎಚ್.ವೈ ಮೇಟಿ ಬಿಜೆಪಿಯ ಚರಂತಿಮಠ ಅವರನ್ನು 5,878 ಮತಗಳ ಅಂತರದಿAದ ಸೋಲಿಸಿದ್ದರು.

ಸಮರ್ಥ್ ಗೆ ಪ್ರಯಾಸದ ಜಯ
ದಾವಣಗೆರೆ: ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಕೊನೆಗೂ ಗೆಲುವು ಸಾಧಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ವಿರುದ್ಧ 5967 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
ಮತದಾನ ಆರಂಭಗೊಂಡ ಮೊದಲ 6 ಸುತ್ತಿನಲ್ಲಿಯೂ ಸಮರ್ಥ್ ಶಾಮನೂರು ಹಿನ್ನಡೆ ಕಾಯ್ದುಕೊಂಡಿದದ್ದರು. 7ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆಯಲ್ಲಿದ್ದರು. ಆದರೆ 8 ಹಾಗೂ 9ನೇ ಸುತ್ತಿನಲ್ಲಿ ಅಂಕಿ-ಸAಖ್ಯೆ ಉಲ್ಟಾ ಆಯಿತು. ಕೊನೆಗೆ ಗೆಲುವು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪಾಲಾಗಿದೆ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now