
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. ಸರ್ಕಾರದಿಂದ ಮಂಜೂರಾಗಿದ್ದ ವಿವಿಯ ಸಹಾಯಕ ಪ್ರಾಧ್ಯಾಪಕರ 24 ಹುದ್ದೆಗಳ ನೇಮಕಾತಿಗೆ ಕಲಬುರಗಿ ಹೈಕೋರ್ಟ್ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರ ನೇಮಕಾತಿಗೆ 16 ಏಪ್ರಿಲ್ 2026 ರಂದು ಮಂಜೂರಾತಿ ನೀಡಿತ್ತು. ಸರ್ಕಾರದ ಕೆಲ ಮಾರ್ಗಸೂಚಿಗಳು ಯು.ಜಿ.ಸಿ ನಿಯಮಾವಳಿಗಳನ್ನು ಉಲ್ಲಂಘಿಸಿವೆ ಎಂದು ಸ್ಪರ್ಧಾಕಾಂಕ್ಷಿಗಳು ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಪೀಠ ನೇಮಕಾತಿ ಪ್ರಕ್ರಿಯೆಗೆ ಮುಂದಿನ ಆದೇಶದವರೆಗೆ ತಡೆ ನೀಡಿದೆ. ವಿವಿಯಲ್ಲಿ ನಡೆಯಬೇಕಿದ್ದ ನೇರ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿದೆ.
ಪ್ರಾಧ್ಯಾಪಕರ ಹುದ್ದೆ ನೇರ ನೇಮಕಾತಿಗೆ ಹೈಕೋರ್ಟ್ ತಡೆ







