--ಇಲ್ಲಿ ಜಾಹೀರಾತು--

ಭೀಕರ ಅಪಘಾತ: 6 ಮಂದಿ ಸಾವು ತುಮಕೂರು ಮತ್ತು ಮಂಡ್ಯ ಸಮೀಪ ಪ್ರತ್ಯೇಕ ಅಪಘಾತದಲ್ಲಿ ದುರಂತ

On: May 9, 2026 2:47 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮಂಡ್ಯ /ತುಮಕೂರು: ಮಂಡ್ಯ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪ ನಡೆದ ಪ್ರತ್ಯೇಕ ಎರಡು ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಕುಣಿಗಲ್ ಬಳಿ ನಡೆದ ಅಪಘಾತದಲ್ಲಿ ಗಂಡ-ಹೆಂಡತಿ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮಂಡ್ಯ ಸಮೀಪದ ನಡೆದ ಅಪಘಾತದಲ್ಲಿ ತಂದೆ-ಮಗ ಜೀವ ಬಿಟ್ಟಿದ್ದಾರೆ.
ತುಮಕೂರು ವರದಿ: ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಶನಿವಾರ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಶನಿವಾರ ಮಧ್ಯಾಹ್ನ ಗೊಬ್ಬರ ತುಂಬಿದ್ದ ಲಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಛಿದ್ರ ಛಿದ್ರವಾಗಿದೆ. ಭೀಕರ ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರದ ಗಾಯತ್ರಿ (63) ಮತ್ತು ಪತಿ ಕುಮಾರ ನರಸಿಂಹಸ್ವಾಮಿ (65) ಮೃತಪಟ್ಟವರು. ಮತ್ತೊಬ್ಬರ ಹೆಸರು ಸಹ ಗಾಯತ್ರಿ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಮಂಡ್ಯ ನಿವಾಸಿ ಕುಮಾರ್ ಅವರು ಕುಟುಂಬದೊಂದಿಗೆ ತುಮಕೂರು ಜಿಲ್ಲೆಯ ದೇವರಾಯನದುರ್ಗ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ತುಮಕೂರು ಕಡೆಯಿಂದ ಹೊರಟಿದ್ದ ಕಾರಿಗೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿಯಾಗಿದೆ. ಪೋಲಿಸರು ಶವಗಳನ್ನು ಹೊರ ತೆಗೆಯಲು ಹರಸಾಹಸ ಪಟ್ಟರು. ಅಪಘಾತದಲ್ಲಿ ಲಾರಿ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ನಂತರ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಪಲ್ಟಿ: ತಂದೆ-ಮಗ ಸಾವು
ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದೆ. ಕಾರು ಪಲ್ಟಿಯಾಗಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕಿರಣ್ (40) ಮತ್ತು ಅವರ ಮಗ ಕಿಶೋರ್ (15) ಎಂದು ಗುರುತಿಸಲಾಗಿದೆ. ಕಿರಣ್ ಅವರ ಪುತ್ರಿ ಕೀರ್ತನಾ (14) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಕೋಣನಹಳ್ಳಿ ಬಳಿಯ ಸೇತುವೆಯ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಮಂಡ್ಯ ತಾಲ್ಲೂಕಿನ ಕಚಿಗೆರೆ ಗ್ರಾಮದ ನಿವಾಸಿಗಳು. ಈ ಕುಟುಂಬ ಮೈಸೂರಿನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಗಾಯಗೊಂಡ ಬಾಲಕಿ ಮತ್ತು ಮೃತರ ಶವಗಳನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ರವಾನಿಸಲಾಗಿದೆ. ಮಂಡ್ಯ ಕೇಂದ್ರ ಪೊಲೀಸ್ ಠಾಣೆಯ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now