
ಬೆಂಗಳೂರು: ರಾಜ್ಯದಲ್ಲಿ ಇಂಧನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ನಾಗರಿಕ ಹಾಗೂ ಆಹಾರ ಸರಬರಾಜು ಇಲಾಖೆಯು ಪೆಟ್ರೋಲ್ ಮತ್ತು ಡೀಸೆಲ್ ವಿತರಣೆಗೆ ಸಂಬಂಧಿಸಿದಂತೆ ಹೊಸ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದೆ. ಗ್ರಾಹಕರಿಗೆ ಕ್ಯಾನ್ ಅಥವಾ ಡಬ್ಬಗಳಲ್ಲಿ ಇಂಧನ ಮಾರಾಟ ಮಾಡುವಂತಿಲ್ಲ ಎಂದು ಆದೇಶಿಸಿದೆ. ಗ್ರಾಹಕರ ಸುರಕ್ಷತೆಯ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಇಂಧನ ವಿತರಣಾ ಕೇಂದ್ರಗಳಿಗೆ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಇಲಾಖೆಯ ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ನಿಯಮ ಉಲ್ಲಂಘಿಸುವ ಪೆಟ್ರೋಲ್ ಬಂಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಕ್ಯಾನ್ ಗಳಿಗೆ ಇಂಧನ ಪೂರೈಕೆ ನಿಷೇಧ








